Cini NewsTollywood

ಪ್ಯಾನ್ ಇಂಡಿಯಾ ಸಿನಿಮಾ ‘ಮಂಗಳವಾರಂ’ ಬಿಡುಗಡೆಗೆ ಮುಹೂರ್ತ ಫಿಕ್ಸ್

Spread the love

‘ಆರ್ ಎಕ್ಸ್ 100’ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ನಿರ್ದೇಶಕ ಅಜಯ್ ಭೂಪತಿ ಪ್ಯಾನ್ ಇಂಡಿಯಾ ಸಿನಿಮಾ ಮಂಗಳವಾರಂ. ಸ್ವಾತಿ ಗುಣಪತಿ ಮತ್ತು ಸುರೇಶ್ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್ ಹಾಗೂ ಅಜಯ್ ಭೂಪತಿ ಅವರ ಎ ಕ್ರಿಯೇಟಿವ್ ವರ್ಕ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ.

ಇದುವರೆಗೂ ನಿರ್ದೇಶಕರಾಗಿದ್ದ ಅಜಯ್ ಭೂಪತಿ, ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮಂಗಳವಾರಂ ಸಿನಿಮಾ ನವೆಂಬರ್ 17ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿದೆ.

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಮಂಗಳವಾರಂ ರಸ್ಟ್ರಿಕ್ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಪಾಯಲ್ ರಜಪೂತ್, ಶ್ರೀತೇಜ್, ಚೈತನ್ಯ ಕೃಷ್ಣ, ಅಜಯ್ ಘೋಷ್, ಲಕ್ಷ್ಮಣ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ‘ಮಂಗಳವಾರಂ’ ಚಿತ್ರಕ್ಕೆ ಕನ್ನಡದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿರಲಿದೆ. ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್ ಯಡವಲ್ಲಿ ಕಾರ್ಯನಿರ್ವಹಿಸಿದ್ದಾರೆ.

Visited 1 times, 1 visit(s) today
error: Content is protected !!