Cini NewsSandalwood

ಇದೇ ಆಗಸ್ಟ್ 23ರಂದು “ಪೌಡರ್” ಚಿತ್ರ ರಿಲೀಸ್ , ಸದ್ದು ಮಾಡುತ್ತಿದೆ ಟ್ರೇಲರ್

Spread the love

ಬಹು ನಿರೀಕ್ಷಿತ ಹಾಸ್ಯ ಚಿತ್ರ “ಪೌಡರ್” ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಚಿತ್ರ ತಂಡ ಇಂದು ಒರಾಯನ್ ಮಾಲ್ ನ ಪಿ.ವಿ‌.ಆರ್ ನಲ್ಲಿ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಲ್ಲಿ ಬಿಡುಗಡೆ ಮಾಡಿದ ಟ್ರೇಲರ್ ತುಣುಕು ತನ್ನ ಅದ್ಭುತವಾದ ಕಾಮಿಡಿ ಟೈಮಿಂಗ್, ವಿಭಿನ್ನ ಕಥಾವಸ್ತು ಮೂಲಕ ಸಿನಿ ಪ್ರಿಯರ ಗಮನ ಸೆಳೆದಿದೆ.

ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್”‌ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”.‌ ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್”‌ ಹಿಂದಿನ “ಪವರ್”‌ ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇದೇ ಆಗಸ್ಟ್ 23ರಂದು ಚಿತ್ರಮಂದಿರಗಳಲ್ಲಿ ಸಿಗಲಿದೆ. ಈಗಾಗಲೇ ತನ್ನ ಟೀಸರ್‌ ಮೂಲಕ “ಪೌಡರ್”‌ ಎಲ್ಲೆಡೆ ನಗೆ ಚಟಾಕಿ ಹತ್ತಿಸಿದ್ದು, ಚಿತ್ರ ಬಿಡುಗಡೆಯ ನಂತರ ಈ ಹಾಸ್ಯ, ನಗು ದುಪ್ಪಟ್ಟುಗೊಳ್ಳಲಿದೆ ಎಂದರೆ ಉತ್ಪ್ರೇಕ್ಷೆಯಲ್ಲ.

ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ ಇನ್ನಿತರರು ನಟಿಸಿರುವ “ಪೌಡರ್” ಚಿತ್ರಕ್ಕೆ ಜನಾರ್ದನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ ಹಾಗೂ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿರುತ್ತಾರೆ. ಕೆ‌.ಆರ್.ಜಿ. ಸ್ಟೂಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ನ ಚೊಚ್ಚಲ ಸಹಯೋಗವಾದ “ಪೌಡರ್” ಚಿತ್ರವನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಹ್ಮಣ್ಯಂ ಕೆ‌.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ‌. ಈ ಚಿತ್ರವು ಇದೇ ಆಗಸ್ಟ್ 23ರಂದು ತೆರೆ ಕಾಣಲಿದೆ.

Visited 1 times, 1 visit(s) today
error: Content is protected !!