Cinisuddi Fresh Cini News 

‘ಪ್ರಾರಂಭ’ ಚಿತ್ರದಲ್ಲಿ ಮಾಸ್ ಹಾಗೂ ಕ್ಲಾಸ್ ಲುಕ್‍ನಲ್ಲಿ ಮನು

ಪ್ರಾರಂಭ ಪ್ರೇಮದ ಆರಂಭ…. ಶುಭ ವೇಳೆಲಿ ಪ್ರೇಮದಾರಂಭ… ಇದು ಕ್ರೇಜಿಸ್ಟಾರ್ ರವಿಚಂದ್ರನ್‍ರ ಮನೆದೇವ್ರು ಚಿತ್ರದ ಜನಪ್ರಿಯ ಗೀತೆ. ಈಗ ಕೇಜ್ರಿ ಪುತ್ರ ಮನುರಂಜನ್ ಪ್ರಾರಂಭ ಎಂಬ ಚಿತ್ರದಲ್ಲಿ ಮಾಸ್ ಹಾಗೂ ಕ್ಲಾಸ್ ಲುಕ್‍ನಲ್ಲಿ ಕಾಣಿಸಿಕೊಂಡಿರುವ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

ಈಗಾಗಲೇ ಈ ಚಿತ್ರದ ಹಾಡುಗಳು ಹಾಗೂ ಟೀಸರ್ ಸಾಕಷ್ಟು ಸದ್ದು ಮಾಡಿರುವುದರಿಂದ ಮನುರಂಜನ್‍ಗೆ ಈ ಚಿತ್ರದ ಬಗ್ಗೆ ಸಹಜವಾಗಿಯೇ ಪ್ರೀತಿಯೂ ಮೂಡಿದೆ. ಅವರು ಈ ಹಿಂದೆ ನಟಿಸಿದ್ದ ಸಾಹೇಬ, ಬೃಹಸ್ಪತಿ ಸಿನಿಮಾಗಳು ಅವರಿಗೆ ಹೆಸರು ತಂದುಕೊಡದಿರುವುದರಿಂದ ಅವರಿಗೆ ಪ್ರಾರಂಭ ಚಿತ್ರವು ಒಂದು ಬ್ರೇಕ್ ನೀಡಬೇಕಾಗಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಪ್ರಾರಂಭ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯುಎ ಅರ್ಹತಾಪತ್ರವನ್ನು ನೀಡಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲ್ಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಹಾಡುಗಳು ಸಮಾಜಿಕ ಜಾಲತಾಣಗಳಲ್ಲಿ ಲಕ್ಷಗಟ್ಟಲೆ ಸಿನಿರಸಕರ ಮನಗೆದ್ದಿದೆ.

   ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸಿದ್ದಾರೆ. ಪ್ರಾರಂಭ ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.   

5ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 2 ಸಾಹಸ ಸನ್ನಿವೇಶಗಳಿದ್ದು , ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‍ಬಾಬು ಛಾಯಾಗ್ರಹಣ, ವಿಜಯ್.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಕಲಕೇರಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ ರಾಘು ಶ್ರೀವಾಸತಿವ್, ಶಾಂಭವಿ, ಸೂರಜ್(ಕಾಮಿಡಿ ಕಿಲಾಡಿಗಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಈ ಹಿಂದೆ ಉಪ್ಪು ಹುಳಿ ಖಾರ ಚಿತ್ರಕ್ಕೆ ಸಂಗೀತ ನೀಡಿದ್ದ, ಪ್ರಜ್ವಲ್ ಪೈ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ.

ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಕೊರೋನಾ ವೈರಸ್ ಕಾರಣದಿಂದ ಚಿತ್ರ ಬಿಡುಗಡೆಯನ್ನು ಮುಂದೂಡಿದ್ದು ಬೆಳ್ಳಿಪರದೆಯ ಮೇಲೆ ಪ್ರಾರಂಭ ತನ್ನ ಆರಂಭವನ್ನು ಸದ್ಯದಲ್ಲೇ ಆರಂಭಿಸಲಿದೆ.

Share This With Your Friends

Related posts