Cini NewsSandalwood

ಪುನೀತ್ ಹುಟ್ಟುಹಬ್ಬಕ್ಕೆ “ಗೌರಿ” ತಂಡದಿಂದ ವಿಶೇಷ ಗೀತೆ

ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಅಪ್ಪು ಅವರ ಅಭಿಮಾನಿ ಎಂದು ಮಾತನಾಡಿದ ಸಮರ್ಜಿತ್, ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು “ಗೌರಿ” ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದರು.ಇಂದ್ರಜಿತ್ ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ನಾನು ಸಹ ಪುನೀತ್ ಅವರ ಅಭಿಮಾನಿ‌ ಎಂದು ತಾನ್ಯ ಹೋಪ್ ತಿಳಿಸಿದರು.

ಈಗಾಗಲೇ “ಗೌರಿ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.

error: Content is protected !!