Cini NewsSandalwood

“ನಾನು ಮತ್ತು ಗುಂಡ -2” ನಲ್ಲಿ ರಾಕೇಶ್ ಅಡಿಗ ನಾಯಕ

‘ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ನಲ್ಲಿ ನಾಯಕ ಯಾರಾಗಿರಬಹುದು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ. ನಟ ರಾಕೇಶ್ ಅಡಿಗ ಅವರು ಈ ಭಾಗದಲ್ಲಿ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾನು ಮತ್ತು ಗುಂಡ ಚಿತ್ರದ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ.

ಮೊದಲ ಭಾಗದಲ್ಲಿ ಮರಣ ಹೊಂದಿದ್ದ ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ.
ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಸಿನಿಮಾ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಸಹ ರಘು ಹಾಸನ್ ಅವರೇ ಹೊತ್ತಿದ್ದಾರೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಚಿತ್ರಕಥೆ ಮುಂದುವರೆಯಲಿದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಈ ಚಿತ್ರದಲ್ಲಿದೆ.

ಚಿತ್ರದ ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ. ಈ ಚಿತ್ರಕ್ಕಿದೆ.
ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-2 ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಅವರ ಸಂಗೀತ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನವಿದೆ

error: Content is protected !!