Cini Gossips Cinisuddi Fresh Cini News 

ಗಡ್ಡದಾರಿ ರಕ್ಷಿತ್ ಶೆಟ್ಟಿ

ಇಡೀ ವಿಶ್ವವೇ ಕೊರೋನಾ ಕಂಟಕದಿಂದ ತತ್ತರಿಸಿದ್ದು, ದೇಶವ್ಯಾಪಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರರಂಗದ ಚಟುವಟಿಕೆ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಈ ಸಮಯದಲ್ಲಿ ಹಲವಾರು ನಟ ನಟಿಯರು ತಮ್ಮ ಮನೆಯಲ್ಲೇ ಇದ್ದು ಬೇರೆ ಕೆಲಸಗಳಲ್ಲಿ ತೊಡಗಿದ್ದಾರೆ. ಇನ್ನು ಕೆಲವರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಹಾಗೆ ಮತ್ತೆ ಕೆಲವರು ತಮ್ಮ ಮುಂದಿನ ಪ್ರಾಜೆಕ್ಟ್‍ಗೆ ಸಿದ್ಧತೆ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೂದಲನ್ನು ಬಿಟ್ಟುಕೊಂಡು ಗಡ್ಡ ದಾರಿಯಾಗಿರುವ ಫೋಟೊವನ್ನು ಶೇರ್ ಮಾಡಿರುವ ನಟ ರಕ್ಷಿತ್ ಶೆಟ್ಟಿ ಅವನೇ ಶ್ರೀಮನ್ನಾರಾಯಣ ಚಿತ್ರದ ಸಮಯದಲ್ಲೆ ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆ ಗಮನ ಹರಿಸಿದರು. ಅದರ ಮುಂದುವರಿದ ಭಾಗವಾಗಿ ತಾವೇ ನಿರ್ದೇಶಿಸುತ್ತಿರುವ ಪುಣ್ಯಕೋಟಿ ಚಿತ್ರದ ಕಥೆ ಬರೆಯುವುದರಲ್ಲಿ ಬ್ಯುಸಿಯಾಗಿದ್ದಾರೆ.

ನಟ ರಕ್ಷಿತ್ ಶೆಟ್ಟಿ ತಮ್ಮ ರೂಮ್ ಮೇಟ್ಸ್ ಗಳ ಜೊತೆಗೆ ಮನೆಯಲ್ಲಿ ಹತ್ತು ಹಲವು ಕೆಲಸಗಳಲ್ಲಿ ತೊಡಗಿದ್ದಾರೆ. ಕಥೆಗಳನ್ನು ಬರೆಯುವುದು, ಜೊತೆಗೆ ಸಿನಿಮಾದ ಕೆಲಸಗಳನ್ನು ಸಹ ಮಾಡಿಕೊಳ್ಳುತ್ತಾ ತಮಗೆ ತೋಚಿದ ಕಥೆ ಬರೆಯುವುದರಲ್ಲಿ ನಿರತರಾಗಿದ್ದಾರೆ.
ಹಾಗೆಯೇ ಚಾರ್ಲಿ ಚಿತ್ರೀಕರಣವನ್ನು ಸದ್ಯಕ್ಕೆ ನಿಲ್ಲಿಸಿದ್ದು, ಯಾವಾಗ ಪ್ರಾರಂಭವಾಗುತ್ತದೆ ತಿಳಿದಿಲ್ಲ.

ಕಿರಣ್ ರಾಜ್ ಅವರು ಚಾರ್ಲಿ ಸಿನಿಮಾದ ಫಸ್ಟ್ ಹಾಫ್‍ನ್ನು ಎಡಿಟ್ ಮಾಡಿ, ಬ್ಯಾಗ್ರೌಂಡ್ ಸ್ಕೋರ್ ಮಾಡುತ್ತಿದ್ದಾರೆ. ಡಬ್ಬಿಂಗ್ ಸಹ ಅರ್ಧ ಆಗಿದ್ದು, ಇನ್ನೂ ಅರ್ಧ ಬಾಕಿ ಇದೆ. ಸದ್ಯ ಬ್ಯಾಗ್ರೌಂಡ್ ಸ್ಕೋರ್ನಲ್ಲಿ ಚಾರ್ಲಿ ಸಾಗುತ್ತಿದೆ. ಹೇಮಂತ್ ರಾವ್ “ಸಪ್ತಸಾಗರದಾಚೆ ಎಲ್ಲೋ” ಸಿನಿಮಾಗೆ ಕಥೆ ಸಿದ್ಧವಾಗುತ್ತಿದ್ದು, ಇದೊಂದು ರೊಮ್ಯಾಂಟಿಕ್ ಚಿತ್ರವಾಗಿ ಹೊರಬರಲಿದೆ ಎಂಬ ನಿರೀಕ್ಷೆ ಚಿತ್ರತಂಡದ್ದು , ಅಲ್ಲದೆ ಪುಣ್ಯಕೋಟಿ ಕಥೆಗೆ ಪೂರಕವಾಗುವಂಥ ಪುಸ್ತಕಗಳನ್ನು ಓದುತ್ತಿದ್ದಾರoತೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಹೇರ್ ಕಟಿಂಗ್ ಸಲೂನ್ ಇಲ್ಲದ ಕಾರಣ ಗಡ್ಡವನ್ನು ಬಿಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನಟ ರಕ್ಷಿತ್ ಶೆಟ್ಟಿ ಹರಿಬಿಟ್ಟಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಅಚ್ಚರಿಯನ್ನುಂಟು ಮಾಡಿದ್ದಾರೆ.

ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ಈ ಪೋಸ್ಟ್‍ಗೆ ಹ್ಯಾಶ್ ಟ್ಯಾಗ್‍ನೊಂದಿಗೆ ಲಾಕ್‍ಡೌನ್ ಎಫೆಕ್ಟ್ ಎಂದು ಬರೆದುಕೊಂಡಿದ್ದಾರೆ. ಬಿಡುವಿನ ಸಮಯವನ್ನು ಅಚ್ಚುಕಟ್ಟಾಗಿ ಬಳಸಿಕೊಳ್ಳುತ್ತಿರುವ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ವಿಭಿನ್ನ ಚಿತ್ರಗಳು ನೀಡುವ ತವಕದಲ್ಲಿ ಇರುವುದಂತೂ ಸತ್ಯ.

Share This With Your Friends

Related posts