Cinisuddi Fresh Cini News Tollywood 

ಟಾಲಿವುಡ್ ಗೆ ಉಪೇಂದ್ರ ರೀ ಎಂಟ್ರಿ..!

ತನ್ನ ಟೀಸರ್ ಮೂಲಕವೇ ಈಗಾಗಲೇ ಚಲನಚಿತ್ರ ರಸಿಕರ ಮನ ಗೆದ್ದಿರುವ ಟಾಲಿವುಡ್‍ನ ಬಾಕ್ಸರ್ ಚಿತ್ರದಲ್ಲಿ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರು ಅಭಿನಯಿಸುತ್ತಿದ್ದಾರೆ. ಹೌದು, ಉಪ್ಪಿ ಆ ಚಿತ್ರದ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಮೂಲಕ ಅವರು ತೆಲುಗು ಚಿತ್ರಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ.

ಟಾಲಿವುಡ್‍ನಲ್ಲಿ ಈಗಾಗಲೇ ಉಪೇಂದ್ರ ಅವರು ಹಲವಾರು ಹಿಟ್ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ಆ ನೆಲದಲ್ಲೂ ಸಹ ತಮ್ಮದೇ ಆದ ಅಭಿಮಾನಿ ವರ್ಗವನ್ನು ಗಳಿಸಿಕೊಂಡಿದ್ದಾರೆ. ಈ ಹಿಂದೆ ಆರ್. ಚಂದ್ರು ನಿರ್ದೇಶನದ ಐ ಲವ್ ಯು ಚಿತ್ರದ ತೆಲುಗು ವರ್ಷನ್‍ನಲ್ಲಿ ಸಹ ಅವರೇ ನಾಯಕನಾಗಿ ಕಾಣಿಸಿಕೊಂಡಿದ್ದರು. ಆ ಚಿತ್ರ ತೆಲುಗು ನೆಲದಲ್ಲಿ ಯಶಸ್ವಿ ಪ್ರದರ್ಸನ ಸಹ ಕಂಡಿತ್ತು.

ಇನ್ನು ಅಲ್ಲು ಅರ್ಜುನ್ ಅಭಿನಯದ ಸನ್ ಆಫ್ ಸತ್ಯಮೂರ್ತಿ ಚಿತ್ರದ ಪೋಷಕ ಪಾತ್ರದಲ್ಲೂ ಕಾಣಿಸಿಕೊಂಡಿದ್ದ ಉಪೇಂದ್ರ ಅವರು ಈಚೆಗೆ ಯಾವುದೇ ತೆಲುಗು ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಇದೀಗ ವರುಣ್ ತೇಜ್ ಅಭಿನಯದ ಬಾಕ್ಸರ್ ಚಿತ್ರದಲ್ಲಿ ಉಪೇಂದ್ರ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ.

ಈಗಾಗಲೇ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಲು ಹೊರಟಿರುವ ಕಬ್ಜ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಉಪೇಂದ್ರ ಅವರು, ತೆಲುಗಿನ ಕಿರಣ್ ಕೊರರ್‍ಪಟ್ಟಿ ಅವರ ನಿರ್ದೇಶನದ ಬಾಕ್ಸರ್ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಉಪೇಂದ್ರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಬಾಕ್ಸರ್ ಚಿತ್ರ ಕ್ರೀಡೆಯ ಹಿನ್ನೆಲೆಯಲ್ಲಿ ನಡೆಯುವ ಕಥಾಹಂದರ ಹೊಂದಿದ ಚಿತ್ರವಾಗಿದೆ. ಈ ಚಿತ್ರದಲ್ಲಿ ವರಣ್ ತೇಜ್ ನಾಯಕರಾಗಿದ್ದು, ಆತ ಒಬ್ಬ ಕಿಕ್ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಬಹುಮುಖ್ಯವಾದ ಒಂದು ಪಾತ್ರದಲ್ಲಿ ಅತಿಥಿಯಾಗಿ ಉಪೇಂದ್ರ ಅವರು ಕಾಣಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

Share This With Your Friends

Related posts