Cinisuddi Fresh Cini News 

‘ರೆಮೋ’ ಇಶಾನ್ ಗೆ ಮೆಗಾ ಸ್ಟಾರ್ ಚಿರಂಜೀವಿಯ ಶುಭ ಹಾರೈಕೆ

‘ರೆಮೋ’ ಸಿನಿಮಾ ಮೂಲಕ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿರುವ ಇಶಾನ್ ಗೆ ಎಲ್ಲರಿಂದ ಶುಭ ಹಾರೈಕೆ ಸಿಗುತ್ತಿದೆ. ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಗಳಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಸುದೀಪ್, ಕ್ರೇಜಿ ಸ್ಟಾರ್ ರವಿಚಂದ್ರನ್ ಹೀಗೆ ಎಲ್ಲರೂ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ಇದೀಗ ತೆಲುಗು ಚಿತ್ರರಂಗದ ಮೆಗಾ ಸ್ಟಾರ್ ಚಿರಂಜೀವಿ ಬ್ಲೆಸ್ಸಿಂಗ್ಸ್ ಕೂಡ ಇಶಾನ್ ಗೆ ಸಿಕ್ಕಿದೆ.

‘ರೆಮೋ’ ಸಿನಿಮಾ ನವೆಂಬರ್ 25ರಂದು ಅದ್ದೂರಿಯಾಗಿ ರಾಜ್ಯಾದ್ಯಂತೆ ತೆರೆ ಕಾಣುತ್ತಿದೆ. ಸಿನಿಮಾ ಪ್ರಚಾರ ಕಾರ್ಯವೂ ಭರ್ಜರಿಯಾಗಿ ನಡೆಯುತ್ತಿದೆ. ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ನಾಯಕ ನಟ ಇಶಾನ್ ಇದೇ ವೇಳೆ ತೆಲುಗು ಮೆಗಾ ಸ್ಟಾರ್ ಚಿರಂಜೀವಿಯನ್ನು ಭೇಟಿ ಮಾಡಿದ್ದಾರೆ. ಇಶಾನ್ ಬಗ್ಗೆ ಮೆಚ್ಚುಗೆಯ ಮಾತನಾಡಿರುವ ಚಿರಂಜೀವಿ ಇಶಾನ್ ಗೆ, ‘ರೆಮೋ’ ಸಿನಿಮಾಗೆ ಶುಭ ಹಾರೈಸಿದ್ದಾರೆ. ಸಿನಿಮಾ ಯಶಸ್ಸು ಕಾಣಲೆಂದು ಮನದುಂಬಿ ಮೆಗಾ ಸ್ಟಾರ್ ಹಾರೈಸಿದ್ದಾರೆ. ಮೆಗಾ ಸ್ಟಾರ್ ಆಶೀರ್ವಾದ ಪಡೆದು ಇಶಾನ್ ಫುಲ್ ಖುಷಿಯಾಗಿದ್ದಾರೆ. ಚಿರಂಜೀವಿ ಭೇಟಿಯಾದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಪವನ್ ಒಡೆಯರ್ ನಿರ್ದೇಶನದ ‘ರೆಮೋ’ ಸಿನಿಮಾ ಮ್ಯೂಸಿಕಲ್ ಮತ್ತು ಔಟ್ ಅಂಡ್ ಔಟ್ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದೆ. ಚಿತ್ರವನ್ನು ಜಯಾದಿತ್ಯ ಬ್ಯಾನರ್ ನಡಿ ಸಿ. ಆರ್. ಮನೋಹರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಿ ಆರ್ ಗೋಪಿ ಸಹ ನಿರ್ಮಾಣವೂ ಚಿತ್ರಕ್ಕಿದೆ. ವೈದಿ ಕ್ಯಾಮೆರಾ ವರ್ಕ್, ಕೆ.ಎಂ. ಪ್ರಕಾಶ್ ಸಂಕಲನ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಈ ಸಿನಿಮಾ ನವೆಂಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Related posts