Cini NewsSandalwood

ದಟ್ಟ ಕಾನನದಲ್ಲಿ ಒಬ್ಬ ಕಟುಕ “ರಿಪನ್ ಸ್ವಾಮಿ”

Spread the love

ಕ್ರೋಧಿನಾಮ ಸಂವತ್ಸರದ ಈ ಯುಗಾದಿಯ ಶುಭ ಸಂದರ್ಭದ ದಿನ ಚಿತ್ರತಂಡವು ಬಹಳಷ್ಟು ಕುತೂಹಲವನ್ನು ಮೂಡಿಸುವಂತಹ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಪಂಚಾಂನನ ಫಿಲಂಸ್ ನಿರ್ಮಾಣದ , ಕಿಶೋರ್ ಮೂಡುಬಿದ್ರೆ ನಿರ್ದೇಶನದ “ರಿಪ್ಪನ್ ಸ್ವಾಮಿ” ಕನ್ನಡ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ .

ವಿಜಯ ರಾಘವೇಂದ್ರರ ಮುಖ್ಯ ತಾರಾಗಣದಲ್ಲಿ ಇರುವ ಈ ಸಿನಿಮಾ ಈ ಹಿಂದೆ ಮಾಲ್ಗುಡಿ ಡೇಸ್ ಕನ್ನಡ ಸಿನಿಮಾ ನಿರ್ದೇಶನ ಮಾಡಿದ್ದ ಕಿಶೋರ್ ಮೂಡಬಿದ್ರೆ ರಚಿಸಿ ನಿರ್ದೇಶನ ಮಾಡಿದ್ದಾರೆ. ಇನ್ನು ತಾರಾಗಣದಲ್ಲಿ ಅಶ್ವಿನಿ ಚಂದ್ರಶೇಖರ್, ಪ್ರಕಾಶ್ ತುಮ್ಮಿ ನಾಡು , ವಜ್ರದೀರ್ ಜೈನ್ , ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್ ಮುಂತಾದವರು ಇದ್ದಾರೆ.

ಇನ್ನು ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು 48 ದಿನಗಳ ಚಿತ್ರೀಕರಣವನ್ನು ಕೊಪ್ಪ ಕಳಸ ಬಾಳೆಹೊನ್ನೂರು ಸುತ್ತಮುತ್ತ ನಡೆಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡುತ್ತಿದ್ದಾರೆ. ರಂಗನಾಥ್ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ.

ಇನ್ನು ಈ ಸಿನಿಮಾ ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಸೇರಿಕೊಂಡು ನಿರ್ಮಾಣ ಮಾಡುತ್ತಿದ್ದಾರೆ .ಪಂಚಾನನ ಫಿಲಂಸ್ ನ ಮೊದಲನೇ ಸಿನಿಮಾ ಇದಾಗಿದೆ .ತನ್ನ ಎಲ್ಲಾ ಕೆಲಸವನ್ನು ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಚಿತ್ರ ಇದ್ದು , ಮುಂದಿನ ಜೂನ್ ಹೊತ್ತಿಗೆ ತೆರೆಗೆ ಬರಲು ಸಿದ್ಧವಾಗಿದೆ.

Visited 1 times, 1 visit(s) today
error: Content is protected !!