Cinisuddi Fresh Cini News 

ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂ ಇನ್ನಿಲ್ಲ..!

ಬೆಂಗಳೂರು,ಸೆ.25- ಸಂಗೀತದ ಮೇರು ಪರ್ವತ, ಗಾನ ಗಾರುಡಿಗ, ಸುಮಧುರ ಹಾಡುಗಳ ಸರದಾರ, ನಟ, ಸಂಗೀತ ನಿರ್ದೇಶಕ ಎಸ್.ಪಿ.ಬಾಲಸುಬ್ರಹ್ಮಣ್ಯಂ (74) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಕರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್​ಪಿಬಿ ಅವರನ್ನು ಆ.5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿಂಗಳ ನಂತರ ಕರೊನಾ ನೆಗೆಟಿವ್​ ಎಂದು ಬಂದಿತ್ತಾದರೂ ಆರೋಗ್ಯದ ಸ್ಥಿತಿಯಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು.

ಗುರುವಾರ ಸಂಜೆ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್​ ಬುಲೆಟಿನ್​ನಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಶುಕ್ರವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಸ್ವರ ಸಂಗೀತ ಲೋಕದ ಮೋಡಿಗಾರ ಎಂದೇ ಪ್ರಸಿದ್ಧರಾದ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು 16 ಭಾಷಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದಾರೆ. 6 ಬಾರಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.

ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಇವರು ಗಾಯನದಲ್ಲಷ್ಟೇ ಅಲ್ಲ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯಲ್ಲೂ ಸಾಧನೆ ಮಾಡಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ ಜೂನ್ 4, 1946ರಲ್ಲಿ ಜನಿಸಿದರು. ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ.

ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದಾರೆ.

Related posts