Cinisuddi Fresh Cini News 

ಇದೇ 26ಕ್ಕೆ ತೆರೆ ಮೇಲೆ “ಸಖತ್” ಸಿನಿಮಾ

ಈಗ ಎಲ್ಲೆಲ್ಲೂ “ಸಖತ್” ಚಿತ್ರದ ಸದ್ದು ಜೋರಾಗಿದೆ. ಈಗಾಗಲೇ ಬಿಡುಗಡೆಗೊಂಡಿರುವ ಪೋಸ್ಟರ್ , ಕಟಕಟೆಯ ಮಾಲ್ ಆ್ಯಕ್ಟಿವಿಟೀಸ್ , ವಿಡಿಯೋ ಬಿಟ್ಸ್ ಹಾಗೂ ಟೈಟಲ್ ಟ್ರ್ಯಾಕ್ ಎಲ್ಲೆಡೆ ಭಾರಿ ವೈರಲ್ ಆಗಿದೆ.
ಚಿನ್ನದ ಹುಡ್ಗ ಗಣೇಶ್ ಹಾಗೂ ಸಿಂಪಲ್ ಸುನಿ ಸಾರಥ್ಯದ ಬಹು ನಿರೀಕ್ಷಿತ “ಸಖತ್” ಸಿನಿಮಾ ದೊಡ್ಡ ಹವಾ ಕ್ರಿಯೇಟ್ ಮಾಡಿದೆ.

ಈಗಾಗಲೇ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಕೆವಿಎನ್ ಸಂಸ್ಥೆ ಸಖತ್ ಚಿತ್ರಕ್ಕೆ ಬಂಡವಾಳ ಹೂಡಿದೆ. ಪ್ರಮೋಷನ್ ಕಹಳೆ ಬಾರಿಸಿರುವ ಸಖತ್ ಸಿನಿಮಾ ಇದೇ ತಿಂಗಳ 26ಕ್ಕೆ ಅದ್ಧೂರಿಯಾಗಿ ತೆರೆಗೆ ಬರಲಿದೆ.

ಪ್ರತಿ ಹಂತದಲ್ಲೂ ಗಮನಸೆಳೆದಿರುವ ಸಖತ್ ಚಿತ್ರದ ಮತ್ತೊಂದು ಗುಡ್ ನ್ಯೂಸ್ ಹೊರಬಂದಿದೆ. ಇದೇ 22ಕ್ಕೆ ಮತ್ತೊಂದು ಹಾಡು ರಿಲೀಸ್ ಆಗಲಿದೆ. ಅರ್ಜುನ್ ಲೂಯಿಸ್ ಸಾಹಿತ್ಯ ಬರೆದು, ಸಿದ್ದಿ ಶ್ರೀರಾಮ್ ಕಂಠದಲ್ಲಿ “ಶುರುವಾಗಿದೆ” ಅನ್ನೋ ಬೊಂಬಾಟ್ ಸಾಂಗ್ ರಿವೀಲ್ ಆಗ್ತಿದೆ.

ಚಮಕ್ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಚಮಕ್ ಕೊಟ್ಟಿದ್ದ ಗಣಿ-ಸುನಿ ಈ ಬಾರಿ ಸಖತ್ ಸಿನಿಮಾ ಮೂಲಕ ಕಾಮಿಡಿ ಹೂರಣ ಬಡಿಸಲು ಸಕಲ ರೀತಿಯಿಂದ ತಯಾರಿಯಾಗಿದ್ದು, ಗಣಿ ಅಂಧನ ಪಾತ್ರಕ್ಕೆ ಬಣ್ಣ ಹಚ್ಚಿದ್ರೆ, ನಿಶ್ವಿಕಾ ನಾಯ್ಡು ಹಾಗೂ ಸುರಭಿ ಚಿತ್ರದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ತಾರಾಗಣದಲ್ಲಿದ್ದಾರೆ.

ಟಿ.ವಿ. ರಿಯಾಲಿಟಿ ಶೋ ಹಾಗೂ ಕೋರ್ಟ್ ಕೇಸ್ ಸುತ್ತ ಸಿನಿಮಾ ಕಥೆ ಹೆಣೆಯಲಾಗಿದೆ. ಕೆವಿಎನ್ ಪ್ರೊಡಕ್ಷನ್‌ ನಡಿ ತಯಾರಾಗಿರುವ “ಸಖತ್” ಚಿತ್ರಕ್ಕೆ ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ.

ಈಗಾಗ್ಲೇ ಸೆನ್ಸಾರ್ ನಿಂದ U/A ಸರ್ಟಿಫಿಕೆಟ್ ಪಡೆದು, ಪಾಸ್ ಆಗಿರುವ ಸಖತ್ ಸಿನಿಮಾ ಅದ್ಧೂರಿಯಾಗಿ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಈಗ ಚಿತ್ರದ ಪ್ರಚಾರದ ಕಾರ್ಯ ಅದ್ದೂರಿಯಾಗಿ ನಡೆಯುತ್ತಿದ್ದು , 26 ರಂದು ಸಖತ್ ಕಟೌಟ್ ಅಬ್ಬರಿಸಲಿದೆ.

Related posts