Cini NewsTollywood

“ಸಲಾರ್“ ಚಿತ್ರದ ಭಾವನಾತ್ಮಕ ಹಾಡು ‘ಆಕಾಶ ಗಾಡಿಯ…’ಬಿಡುಗಡೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವೆಂದರೆ ಅದು ಹೊಂಬಾಳೆ ಫಿಲಂಸ್‍ನ ‘ಸಲಾರ್ ಪಾರ್ಟ್‍ 1: ಸೀಸ್‍ಫೈರ್’. ಪ್ರಶಾಂತ್‍ ನೀಲ್‍ ನಿರ್ದೇಶನದ, ಪ್ರಭಾಸ್‍ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

ಭಾರತದ ಬೃಹತ್‍ ಆ್ಯಕ್ಷನ್‍ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ಲಿರಿಕಲ್‍ ಹಾಡು, ಹೊಂಬಾಳೆ ಫಿಲಂಸ್‍ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಆಗಿದೆ.

ಇದೊಂದು ಭಾವನಾತ್ಮಕ ಹಾಡಾಗಿದ್ದು, ಇಬ್ಬರು ಗೆಳೆಯರ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಅವರಿಬ್ಬರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ವಿಶ್ಲೇಷಿಸುತ್ತದೆ. ಈ ಹಾಡನ್ನು ಕಿನ್ನಾಲ್ ರಾಜ್‍ ಬರೆದಿದ್ದು, ವಿಜಯಲಕ್ಷ್ಮೀ ಮೆತ್ತಿನಹೊಳೆ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ.

ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರವು ಎರಡು ಗಂಟೆ 55 ನಿಮಿಷಗಳ ಅವಧಿಯಾಗಿದ್ದು, ಈ ಚಿತ್ರದಲ್ಲಿ ಬೃಹತ್‍ ಪ್ರಮಾಣ ಆ್ಯಕ್ಷನ್‍ ದೃಶ್ಯಗಳಿದೆ.

‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ

error: Content is protected !!