Cinisuddi Fresh Cini News 

“ರಾಣ” ಚಿತ್ರದ ಹಾಡಿಗೆ ಕಿರಿಕ್ ಪಾರ್ಟಿ ಸಂಯುಕ್ತ ಹೆಗ್ಡೆ ಸ್ಟೆಪ್ಸ್

ಶ್ರೇಯಸ್ಸ್ ಕೆ ಮಂಜು ಅಭಿನಯದ “ರಾಣ” ಚಿತ್ರದ ಹಾಡೊಂದಕ್ಕೆ ನಟಿ “ಕಿರಿಕ್ ಪಾರ್ಟಿ” ಸಿನಿಮಾ ಖ್ಯಾತಿಯ ಸಂಯುಕ್ತ ಹೆಗ್ಡೆ ಹೆಜ್ಜೆ ಹಾಕಲಿದ್ದಾರೆ.ಕಂಠೀರವ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶಿವು(ಕೆ ಜಿ ಎಫ್) ನಿರ್ಮಿಸಿರುವ ಭವ್ಯವಾದ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ. ‌

ಶಿವು ಭೇರ್ಗಿ ಈ ಹಾಡನ್ನು ಬರೆದಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ. ನಂದಕಿಶೋರ್ ಈ ಚಿತ್ರವನ್ನು
ನಿರ್ದೇಶಿಸುತ್ತಿದ್ದಾರೆ. ಶ್ರೇಯಸ್ಸ್ ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ.

ಕೆ. ಮಂಜು ಅರ್ಪಿಸುವ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ನಿರ್ಮಿಸುತ್ತಿದ್ದಾರೆ. ಶೇಖರ್ ಚಂದ್ರು ಛಾಯಾಗ್ರಹಣ ಕೆ.ಎಂ.ಪ್ರಕಾಶ್ ಸಂಕಲನ, ವಿಶ್ವ , ಶಿವು ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ “ರಾಣ” ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ‌.’

Related posts