Cinisuddi Fresh Cini News 

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು..!

ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರು ಉಸಿರಾಟದ ಸಮಸ್ಯೆಯಿಂದಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲವು ವರ್ಷಗಳಿಂದ ಉಸಿರಾಟದಲ್ಲಿ ಏರುಪೇರುಗಳು ಎದುರಾಗಿದ್ದು , ಜಯಂತಿ ಅವರಿಗೆ ನಾಲ್ಕು ತಿಂಗಳ ಹಿಂದೆ ಕೂಡ ಅಸ್ತಮಾ ಉಲ್ಬಣ ಆಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ನಿನ್ನೆ ಮತ್ತೆ ಅವರ ಅರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದ್ದು,ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯಂತೆ. ಹಿರಿಯ ನಟಿ ಜಯಂತಿಗೂ ಕೂಡ ಕೊರೋನಾ ಟೆಸ್ಟ್ ನಡೆಸಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆಯoತೆ.

ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂಬ ಮಾಹಿತಿಯನ್ನು ವೈದ್ಯರು ತಿಳಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Share This With Your Friends

Related posts