Cinisuddi Fresh Cini News 

“ಬ್ಯಾಂಗ್”ನ ಶಾನ್ವಿ ಗ್ಯಾಂಗ್ ಸ್ಟರ್

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ್ ಬ್ಯಾಂಗ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಾಣಿಸಿ ಕೊಳ್ಳುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆ ಗೊಂಡಿರುವ ಶಾನ್ವಿ ಅವರು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರ ನಿರ್ವಹಿಸುತ್ತಿದ್ದಾರೆ.

ಯು.ಕೆ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.‌ ಈಗಾಗಲೇ ಆನ ಹಾಗೂ ನಾನು, ಅದು ಮತ್ತು ಸರೋಜ ಚಿತ್ರಗಳನ್ನು ನಿರ್ಮಾಣ ಮಾಡಿರುವ ಪೂಜಾ ವಸಂತಕುಮಾರ್ ಅವರ ನಿರ್ಮಾಣದ ಮೂರನೇ ಚಿತ್ರ ‘ಬ್ಯಾಂಗ್’. ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶನ ಹಾಗೂ ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಗಣೇಶ್ ಪರಶುರಾಮ್ ಈ ಚಿತ್ರದ ನಿರ್ದೇಶಕರು.

ನಾಲ್ಕು ಹಾಡುಗಳಿರುವ ಈ‌ ಚಿತ್ರಕ್ಜೆ ರಿತ್ವಿಕ್ ಮುರಳಿಧರ್ ಸಂಗೀತ ನೀಡುತ್ತಿದ್ದಾರೆ. ಉದಯಲೀಲ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ. ಸೌಂಡ್ ಡಿಸೈನ್ ನವೀನ್ ಕುಮಾರ್ ಅವರದು.
ಬ್ಯಾಂಗ್ ಕೇವಲ ಏಳು – ಎಂಟು ಪಾತ್ರಗಳ ನಡುವೆ ಎರಡು ದಿನಗಳಲ್ಲಿ ನಡೆಯುವ ಕಥೆ .

ಶಾನ್ವಿ ಶ್ರೀವಾಸ್ತವ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಉಳಿದ ಪಾತ್ರಗಳಲ್ಲಿ ಅಭಿಯಿಸಿರುವ ಕಲಾವಿದರ ಮಾಹಿತಿಯನ್ನು ಹಂತ ಹಂತವಾಗಿ ಪರಿಚಯಿಸ ಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ಎರಡು ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಫೆಬ್ರವರಿಯಲ್ಲಿ ಮೂರನೇ ಹಂತದ ಚಿತ್ರೀಕರಣ ಮಂಗಳೂರಿನಲ್ಲಿ ನಡೆಯಲಿದೆ.

Related posts