Cinisuddi Fresh Cini News 

ಶಿವಾರ್ಜುನ’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ

ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸುತ್ತಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವಶಿವಾರ್ಜುನ` ಚಿತ್ರದ ಫಸ್ಟ್ ಲುಕ್ ಟೀಸರ್ ಧೃವಸರ್ಜಾ ಬಿಡುಗಡೆ ಮಾಡಿದರು.

ಇತ್ತೀಚೆಗೆ ನಡೆದ ನಾಯಕ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ದಿನ ಈ ಫಸ್ಟ್ ಲುಕ್ ಟೀಸರ್ ಅನಾವರಣಗೊಂಡಿದೆ. ನಟಿ ತಾರಾ ವೇಣು, ಮೇಘನಾ ರಾಜ್, ನಿರ್ಮಾಪಕ ಉದಯ್ ಕೆ ಮೆಹ್ತಾ, ಚಿತ್ರತಂಡ ಹಾಗೂ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಈ ಫಸ್ಟ್ ಲುಕ್ ಟೀಸರ್ ಲೋಕಾರ್ಪಣೆಯಾಗಿದೆ.

ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಹಾಗೂ ಮಾತಿನ ಜೋಡಣೆ ಮುಕ್ತಾಯವಾಗಿದೆ. ಹೆಚ್.ಸಿ.ವೇಣು ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸುರಾಗ್ ಸಂಗೀತ ನೀಡುತ್ತಿದ್ದಾರೆ.

ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿನೋದ್, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ಚೇತನ್‍ಕುಮಾರ್(ಬಹದ್ದೂರ್) ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಮೃತ, ಅಕ್ಷತ, ತಾರಾ, ಅವಿನಾಶ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ಸಾಧುಕೋಕಿಲ, ರವಿ ಕಿಶನ್, ತರಂಗ ವಿಶ್ವ, ಕೆ.ಆರ್.ಪೇಟೆ ಶಿವರಾಜ್, ನಯನ ಮುಂತಾದವರಿದ್ದಾರೆ.

Share This With Your Friends

Related posts