Cinisuddi Fresh Cini News 

“SRi KRISHNA@Gmail.Com” ಚಿತ್ರದ ಶೂಟಿಂಗ್ ಕಂಪ್ಲೀಟ್

ಸದಭಿರುಚಿಯ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಹೆಮ್ಮೆಯ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಎಂ.ಎಲ್. ಸಿ (ರಾಷ್ಟಪ್ರಶಸ್ತಿ ವಿಜೇತ) ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ srikrishna@gmail.com ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಕಳೆದ ಎಂಟು ದಿನಗಳಿಂದ ಮೇಲು ಕೋಟೆ, ಮೈಸೂರು ಸುತ್ತಮುತ್ತ ಹಾಡಿನ ಚಿತ್ರೀಕರಣ ‌ನಡೆದಿದ್ದು, ಇಂದು ಮೈಸೂರಿನ ಸಂದೇಶ್ ಹೋಟೆಲ್‌ ನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಒಟ್ಟು ತೊಂಬತ್ತು ದಿನಗಳ ಚಿತ್ರೀಕರಣ ನಡೆದಿದೆ.

ನಾಗಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಾರಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ. ಭಾವನಾ ಈ ಚಿತ್ರದ ನಾಯಕಿ. ಚಂದನ್ ಗೌಡ ದ್ವಿತೀಯ ನಾಯಕರಾಗಿ ನಟಿಸಿರುವ ಈ ಚಿತ್ರದ ಅತಿಥಿ ಪಾತ್ರದಲ್ಲಿ ನಿರ್ದೇಶಕ, ನಾಯಕ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ದತ್ತಣ್ಣ, ಸಾಧುಕೋಕಿಲ, ಚಿಕ್ಕಣ್ಣ, ಸಾತ್ವಿಕ್(ಕಾರ್ಪೊರೇಟರ್), ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮುಂತಾದ ಅದ್ದೂರಿ ತಾರಾಬಳಗ ಈ ಚಿತ್ರದಲ್ಲಿದೆ.

ಈ ಹಿಂದೆ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ಬಿಡುಗಡೆಯಾಗಿ ಯಶಸ್ವಿಯಾಗಿದ್ದ “ಅಮರ್” ಚಿತ್ರವನ್ನೂ ನಾಗಶೇಖರ್ ಅವರೆ ನಿರ್ದೇಶಿಸಿದ್ದರು.

ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರೆ. ಕವಿರಾಜ್ ಗೀತರಚನೆ ಮಾಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣವಿರುವ srikrishna@gmail.com ಚಿತ್ರಕ್ಕೆ ದೀಪು ಎಸ್ ಕುಮಾರ್ ಸಂಕಲನ ಹಾಗೂ ಅರುಣ್ ಸಾಗರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Related posts