Cini Gossips Cinisuddi Fresh Cini News 

ಕೆಜಿಎಫ್ ನಾಯಕಿ ಶ್ರೀನಿಧಿ ಶೆಟ್ಟಿ ನಿಶ್ಚಿತಾರ್ಥ..!

ರಾಕಿಂಗ್‍ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟ ಬ್ಯೂಟಿಫುಲ್ ನಟಿ ಶ್ರೀನಿಧಿ ಶೆಟ್ಟಿ. ತನ್ನ ಮೊದಲ ಚಿತ್ರದಿಂದಲೇ ಈಕೆ ಈಗಾಗಲೇ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಇದೀಗ ಇದ್ದಕ್ಕಿದ್ದ ಹಾಗೆ ನಟಿ ಶ್ರೀನಿಧಿ ಶೆಟ್ಟಿ ಅವರ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅರೆ ಅದ್ಯಾವಾಗ ಈಕೆಯ ಮದುವೆ ನಿಶ್ಚಯವಾಯ್ತು ಎಂದು ಆಶ್ಚರ್ಯಪಡಬೇಡಿ, ಇದು ಆನ್‍ಸ್ಕ್ರೀನ್ ಎಂಗೇಜ್‍ಮೆಂಟ್ ಅಷ್ಟೇ.

ನಟಿ ಶ್ರೀನಿಧಿ ಅವರೇ ತಮ್ಮ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆ ಮತ್ತು ಕೆಲವು ಫೋಟೋಗಳನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಆ ಫೋ]ಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ ಶ್ರೀನಿಧಿ ಶೆಟ್ಟಿ ಅವರ ನಿಶ್ಚಿತಾರ್ಥ ನಡೆಯುತ್ತಿರುವುದು ರಿಯಲ್ ಆಗಿ ಅಲ್ಲ, ಅವರು ನಾಯಕಿಯಾಗಿ ಅಭಿನಯಿಸುತ್ತಿರುವ ತಮಿಳಿನ ಕೋಬ್ರಾ ಸಿನಿಮಾದಲ್ಲಿ. ಸದ್ಯಕ್ಕೆ ಕೆಜಿಎಫ್-2 ಚಿತ್ರದ ಕೆಲಸದಲ್ಲಿ ಶ್ರೀನಿಧಿ ಶೆಟ್ಟಿ ಅವರು ಬ್ಯುಸಿಯಾಗಿದ್ದಾರೆ.

ಜೊತೆಗೆ ತಮಿಳಿನ ಕೋಬ್ರಾ ಸಿನಿಮಾದಲ್ಲಿಯೂ ಸಹ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ ನಾಯಕನಾಗಿ ಅಭಿನಯಿಸಿದ್ದು, ಇವರಿಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡೊಂದು ಬಿಡುಗಡೆಗೆ ಸಿದ್ಧವಾಗಿತ್ತು.
ಈ ಹಾಡು ನಾಯಕ ಮತ್ತು ನಾಯಕಿಯ ನಿಶ್ಚಿತಾರ್ಥ ಸಮಾರಂಭಕ್ಕೆ ಸಂಬಂಧಿಸಿದ್ದಾಗಿದೆ. ಹೀಗಾಗಿ ಹಾಡಿನ ಬಿಡುಗಡೆಗೆಂದೇ ವಿಶೇಷವಾದ ಆಮಂತ್ರಣ ಪತ್ರಿಕೆಯನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ‘

ಈ ಪೋಸ್ಟನ್ನು ನಟಿ ಶ್ರೀನಿಧಿ ಶೆಟ್ಟಿ ಅವರು ಕೂಡ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿದ್ದರು. ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಕೂಡ ತಿಳಿಸಿದ್ದರು. ಅಲ್ಲದೇ ಹಾಡಿನಲ್ಲಿ ಬರುವ ಕೆಲವು ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಕೂಡ ಅವರು ಶೇರ್ ಮಾಡಿಕೊಂಡಿದ್ದರು.

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ಈಗ ಕೋಬ್ರಾ ಚಿತ್ರದ ಈ ಹಾಡನ್ನು ರಿಲೀಸ್ ಮಾಡಲಾಗಿದೆ. ಈಗಾಗಲೇ ಕೋಬ್ರಾ ಚಿತ್ರದ ಸಾಕಷ್ಟು ಭಾಗದ ಚಿತ್ರೀಕರಣವನ್ನು ಮುಗಿಸಿರುವ ಸಿನಿಮಾತಂಡ ಲಾಕ್ಡೌನ್ ಕಾರಣದಿಂದ ಚಿತ್ರೀಕರಣವನ್ನು ಸ್ಥಗಿತಗೊಳಿಸಿತ್ತು.

ಈಗ ಚಿತ್ರತಂಡ ಮತ್ತೆ ಕೋಬ್ರಾ ಚಿತ್ರದ ಶೂಟಿಂಗ್ ಆರಂಭಿಸಲು ಸಿದ್ಧವಾಗಿದೆ. ಸದ್ಯಕ್ಕೆ ಶ್ರೀನಿಧಿ ಶೆಟ್ಟಿ ಅವರ ನಿತಾರ್ಥದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Related posts