Cinisuddi Fresh Cini News 

‘ಶುಗರ್ ಫ್ಯಾಕ್ಟರಿ’ಯಲ್ಲಿ ಗ್ಲಾಮರ್ ಬೆಡಗಿ ಅದ್ವಿತಿ ಶೆಟ್ಟಿ

ಚಿತ್ರೀಕರಣ ಆರಂಭಕ್ಕೂ ಮುನ್ನವೇ ಸಾಕಷ್ಟು ನಿರೀಕ್ಷೆಯಲ್ಲಿರುವ ಚಿತ್ರ ಶುಗರ್ ಫ್ಯಾಕ್ಟರಿ . ನಟಿ‌ ಅಮೂಲ್ಯ ‌ಸೋದರ ದೀಪಕ್ ಅರಸ್ ನಿರ್ದೇಶಿಸುತ್ತಿರುವ ಹಾಗೂ ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಮೂವರು ನಾಯಕಿಯರು ಅಭಿನಯಿಸುತ್ತಿದ್ದಾರೆ.

ಮೊದಲ ನಾಯಕಿಯಾಗಿ ಚೆಲುವೆ ಸೋನಾಲ್ ಮಾಂಟೆರೊ ಆಯ್ಕೆಯಾಗಿದ್ದು, ದ್ವಿತೀಯ ನಾಯಕಿಯಾಗಿ ಗ್ಲಾಮರ್ ಬೆಡಗಿ ಅದ್ವಿತಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಮನೆಮಾತಾಗಿರುವ ಅದ್ವಿತಿ ಶೆಟ್ಟಿ ಶುಗರ್ ಫ್ಯಾಕ್ಟರಿ , ಸೇರಿಕೊಂಡಿದ್ದಾರೆ.

ಡಾರ್ಲಿಂಗ್ ಕೃಷ್ಣ ನಿಗೆ ನಾಯಕಿಯರಾಗಿ ಸೋನಾಲ್ ಮಾಂಟೆರೊ ಹಾಗೂ ಅದ್ವಿತಿ ಶೆಟ್ಟಿ ಆಯ್ಕೆಯಾಗಿದ್ದು , ಮೂರನೇ ನಾಯಕಿ‌ ಯಾರು? ಎಂಬುದು ಸದ್ಯದಲ್ಲೇ ತಿಳಿಯಲಿದೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌

ಜನವರಿಯಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಕಬೀರ್ ರಫಿ ಸಂಗೀತ ನಿರ್ದೇಶನ ಹಾಗೂ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿರುವ ಶುಗರ್ ಫ್ಯಾಕ್ಟರಿ ಗೆ ಬಹದ್ದೂರ್ ಚೇತನ್ ಕುಮಾರ್ ಸಂಭಾಷಣೆ ಬರೆಯುತ್ತಿದ್ದಾರೆ.

Related posts