ಬಾಲಿವುಡ್ ಗೆ ಎಂಟ್ರಿ ನಟಿ ರಾಗಿಣಿ ದ್ವಿವೇದಿ.

ಕಳೆದ ೧೩ ವರ್ಷದಿಂದ ಸ್ಯಾಂಡಲ್ ವುಡ್ ನಲ್ಲಿ ಸಕ್ರಿಯರಾಗಿರುವ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಈಗ ಹಿಂದಿ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಬಂದಿರುವ ರಾಗಿಣಿ ಖುಷಿ ಹಂಚಿಕೊಳ್ಳಲು ಇತ್ತೀಚೆಗೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಾಗಿಣಿ ‘ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಜರ್ನಿ ಆಗಿದೆ. ಕಳೆದ ವರ್ಷ (೨೦೨೨) ಹೆಚ್ಚಾಗಿ ಶೂಟಿಂಗ್ ನಲ್ಲಿ ಬ್ಯುಸಿ ಇದ್ದೇ. ಈಗ ಹಿಂದಿ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಮೊದಲ ಹಂತದ ಶೂಟಿಂಗ್ ಮುಗಿದಿದೆ. ಇದೊಂದು ಹಾರರ್, ಥ್ರಿಲ್ಲರ್ ಚಿತ್ರವಾಗಿದ್ದು,… Read More