Cinisuddi Fresh Cini News Tv / Serial 

ಜೈಲಿನಲ್ಲಿ “ಬಾಂಡ್ ರವಿ” ಜೋಶ್ ಸಾಂಗ್.

ಸ್ಯಾಂಡಲ್ ವುಡ್ ಅಂಗಳದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಚಿತ್ರ ಬಾಂಡ್ ರವಿ. ಟೀಸರ್ ಮೂಲಕ ಎಲ್ಲರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರದ ಮೇಲೆ ಸಿನಿರಸಿಕರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಕೆಲಸ ಮುಗಿಸಿ ಬಿಡುಗಡೆಗೆ ಎದುರು ನೋಡುತ್ತಿರುವ ಚಿತ್ರತಂಡ ಚಿತ್ರದ ಮೊದಲ ಸಾಂಗ್ ಬಿಡುಗಡೆ ಮಾಡಿದೆ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯದಲ್ಲಿ ಅರಳಿರುವ ‘ಮಜಾ ಮಜಾ ಮಾಡು ಬಾ’ ಹಾಡಿಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ದನಿಯಾಗಿದ್ದು, ಮನೋಮೂರ್ತಿ ಸಂಗೀತ ಹಾಡಿಗಿದೆ. ಜೋಶ್ ಜೊತೆಗೆ ಒಂದೊಳ್ಳೆ ಮೋರಲ್ ಇರುವ ಸಾಂಗ್… Read More
Cinisuddi Fresh Cini News 

ಕುತೂಹಲ ಮೂಡಿಸಿದ  ಪ್ರಮೋದ್ ನಟನೆಯ ‘ಬಾಂಡ್ ರವಿ’ ಟೀಸರ್ ಭಾರೀ ವೈರಲ್.

ಸ್ಯಾಂಡಲ್ ವುಡ್ ಅಂಗಳದ ಯುವ ಹಾಗೂ ಪ್ರತಿಭಾನ್ವಿತ ನಾಯಕ ನಟ ಪ್ರಮೋದ್. ರತ್ನನ್ ಪ್ರಪಂಚದಲ್ಲಿ ಉಡಾಳ್ ಬಾಬು ಆಗಿ ಸಿನಿ ಪ್ರೇಕ್ಷಕರ ಮನಸೂರೆಗೊಂಡ ಪ್ರಮೋದ್ ‘ಬಾಂಡ್ ರವಿ’ಯಾಗಿ ತೆರೆ ಮೇಲೆ ಬರೋಕೆ ಸಜ್ಜಾಗಿದ್ದಾರೆ. ಈ ಚಿತ್ರದ ಇಂಟ್ರಸ್ಟಿಂಗ್ ಹಾಗೂ ಅಷ್ಟೇ ಖಡಕ್ ಆದ ಟೀಸರ್ ಇಂದು ಬಿಡುಗಡೆಯಾಗಿದೆ. ಪ್ರಮೋದ್ ಖಡಕ್ ಅಂಡ್ ಮಾಸ್ ಆಕ್ಟಿಂಗ್ ಎಲ್ಲರ ಗಮನ ಸೆಳೆಯುತ್ತಿದೆ. ಟೀಸರ್ ನೋಡಿದವರು ಬಾಂಡ್ ರವಿ ಬ್ರ್ಯಾಂಡ್ ರವಿ ಆಗೋದ್ರಲ್ಲಿ ಡೌಟೇ ಇಲ್ಲ ಅಂತಿದ್ದಾರೆ. ಟೀಸರ್ ಪತ್ರಕರ್ತರಿಂದ ಬಿಡುಗಡೆಯಾಗಿದ್ದು ವಿಶೇಷ. ಇದಕ್ಕೆ ಕಾರಣ ನಟ ಪ್ರಮೋದ್.… Read More