ಜೂ.18ಕ್ಕೆ ನೆಟ್​​ಫ್ಲಿಕ್ಸ್​ನಲ್ಲಿ ಧನುಷ್​ ನಟನೆಯ “ಜಗಮೇ ತಂಧಿರಮ್” ರಿಲೀಸ್

ಕಾಲಿವುಡ್​ ಸ್ಟಾರ್ ನಟ ಧನುಷ್ ಇದೀಗ ಚೊಚ್ಚಲ ಓಟಿಟಿ ವೇದಿಕೆಗೆ ಪದಾರ್ಪಣೆ ಮಾಡಲು ಸಿದ್ಧತೆಯಲ್ಲಿದ್ದಾರೆ. ತುಂಬ ಸದ್ದು ಮಾಡಿರುವ ಜಗಮೇ ತಂಧಿರಮ್ ಚಿತ್ರ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಸ್ಟ್ರೀಮ್ ಆಗಲಿದೆ. ಜೂನ್ 18ಕ್ಕೆ ಬಿಡುಗಡೆಯ ದಿನಾಂಕವನ್ನೂ ಚಿತ್ರತಂಡ ಘೋಷಣೆ ಮಾಡಿದ್ದು, ಅಭಿಮಾನಿಗಳ ಕಾಯುವಿಕೆಗೆ ಉತ್ತರ ಸಿಕ್ಕಿದೆ. ಕಾರ್ತಿಕ್ ಸುಬ್ಬರಾಜು ನಿರ್ದೇಶನದ ಈ ಸಿನಿಮಾ ಎಲ್ಲ ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿರಬೇಕಿತ್ತು. ಕೊರೋನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಬಿಡುಗಡೆ ಮುಂದೂಡಲ್ಪಟ್ಟಿತ್ತು. ಸದ್ಯದ ಸ್ಥಿತಿ ನೋಡಿದರೆ ಚಿತ್ರಮಂದಿರ ತೆರೆಯುವ ಲಕ್ಷಣಗಳು ಕಾಣುತ್ತಿಲ್ಲ. ಹಾಗಾಗಿ ಇದೀಗ ಓಟಿಟಿ ಮೊರೆ… Read More