ವಿಭಿನ್ನವಾಗಿ ಪ್ರಚಾರ ಆರಂಭಿಸಿದ “ಕಡಲ ತೀರದ ಭಾರ್ಗವ” ಚಿತ್ರತಂಡ

ಚಿತ್ರೀಕರಣ ಮುಕ್ತಾಯವಾದ ಮೇಲೆ ಚಿತ್ರತಂಡ ತನ್ನದೇ ಆದ ರೀತಿಯಲ್ಲಿ ಪ್ರಚಾರ ಕಾರ್ಯ ಆರಂಭಿಸುತ್ತಾರೆ. ಆದರೆ “ಕಡಲ ತೀರದ ಭಾರ್ಗವ” ಚಿತ್ರತಂಡ ತಮ್ಮ ಪ್ರಚಾರ ಕಾರ್ಯವನ್ನು ವಿನೂತನ ಶೈಲಿಯಲ್ಲಿ ಆರಂಭಿಸಿದೆ. ಇತ್ತೀಚೆಗೆ ಬ್ಲೀಡ್ ಆರ್ ಸಿ ಬಿ ಅವರ ಸಹಯೋಗದೊಂದಿಗೆ ಜೆ.ಪಿ.ನಗರದ ಪುಟ್ಟೇನಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ರಘುದೀಕ್ಷಿತ್, ಅಲೋಕ್, ಭಾ.ಮ.ಹರೀಶ್, ಬೃಂದಾ ಆಚಾರ್ಯ, ದಿಶಾ ಪೂವಯ್ಯ ಮುಂತಾದ ಗಣ್ಯರು ಈ ರಕ್ತದಾನ ಶಿಬಿರಕ್ಕೆ ಆಗಮಿಸಿ ಚಾಲನೆ ನೀಡಿದರು. ಬೆಂಗಳೂರು, ಕುಂದಾಪುರ, ಭಟ್ಕಳ, ಕುಮಟಾ, ಮುರುಡೇಶ್ವರ ಮುಂತಾದ ಕಡೆ 63 ದಿನಗಳ ಚಿತ್ರೀಕರಣ… Read More