ಮಂತ್ರಾಲಯ ಗುರುಗಳಿಂದ ‘ಓ ಮೈ ಲವ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ತೂಫಾನ್, ಬಳ್ಳಾರಿ ದರ್ಬಾರ್, 18 ಟು 25 ಚಿತ್ರಗಳನ್ನು ನಿರ್ದೇಶಿಸಿರುವ ಸ್ಮೈಲ್ ಶ್ರೀನು ಈಗ ಮತ್ತೊಂದು ಬಿಗ್ ಬಜೆಟ್ ಚಿತ್ರಕ್ಕೆ ಕೈ ಹಾಕಿದ್ದಾರೆ. ನಟ ಶಶಿಕುಮಾರ್ ಅವರ ಪುತ್ರ ಅಕ್ಷಿತ್ ಶಶಿಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ.ಆರಂಭದಿಂದಲೂ ವಿಭಿನ್ನ ಚಿತ್ರಗಳನ್ನೇ ನಿರ್ದೇಶಿಸುತ್ತ ಬಂದಿರುವ ಸ್ಮೈಲ್ಶ್ರೀನು ಈಗ ಮತ್ತೊಂದು ಪ್ರೇಮಕಥೆಯನ್ನು ತೆರೆಮೇಲೆ ತರಲು ಹೊರಟಿದ್ದಾರೆ. ಲವ್, ಫ್ಯಾಮಿಲಿ ಎಂಟರ್ ಟೈನರ್ ಕಥಾನಕ ಹೊಂದಿರುವ ಈ ಚಿತ್ರದಲ್ಲಿ ಹದಿಹರೆಯದ ಪ್ರೀತಿ-ಪ್ರೇಮ, ವೈ ಫೈ ಯುಗದಲ್ಲಿ ಕಣ್ಮರೆಯಾಗುತ್ತಿರುವ ಭಾವನಾತ್ಮಕ ಸಂಬಂಧಗಳ ಕುರಿತಾಗಿ ಹೇಳಹೊರಟಿರುವ ನಿರ್ದೇಶಕ ಸ್ಮೈಲ್ಶ್ರೀನು ಅವರು…
Read More