ಸಿನಿಮಾ ಆಗ್ತಿದೆ ಲಾಕ್ ಡೌನ್ ನಲ್ಲಿ ನಡೆದ ದುರಂತ ಪ್ರೇಮಕಥೆ

ಕರೋನಾ ಲಾಕ್ಡೌನ್ ಸಮಯದಲ್ಲಿ ಏನೆಲ್ಲ ಅಪರೂಪದ ಘಟನೆಗಳು ನಡೆದವೆಂದು ಎಲ್ಲರಿಗೂ ಗೊತ್ತಿದೆ. ಈಗ ಆ ಸಮಯದಲ್ಲಿ ನಡೆದಂಥ ಒಂದು ಲಾಕ್ ಡೌನ್ ಸಮಯದಲ್ಲಿ ನಡೆದ ಪ್ರೀತಿ, ಪ್ರೇಮ ಪ್ರಣಯದ ಕಥೆಯನ್ನು ತೆರೆಯ ಮೇಲೆ ತರಲು ಹೊರಟಿದ್ದಾರೆ ನಿರ್ದೇಶಕ ಮಂಜುನಾಥ್ ಬಿ.ರಾಮ್. ಶ್ರೀಕನ್ನಡಾಂಬೆ ಮೂವೀಸ್ ಬ್ಯಾನರ್ ಅಡಿಯಲ್ಲಿ ಎಂ.ನಾರಾಯಣಸ್ವಾಮಿ ಅವರು ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಹೆಸರು ಲವ್ ಇನ್ ಲಾಕ್ಡೌನ್. ನಿರ್ದೇಶಕ ಮಂಜುನಾಥ್ ಬಿ.ರಾಮ್ ಅವರು ತಾವು ಕಣ್ಣಾರೆ ಕಂಡ ಪ್ರೇಮಕಥೆಯೊಂದನ್ನು ಹಾಗೂ ಅದರ ದುರಂತ ಅಂತ್ಯವನ್ನು ಸಿನಿಮಾ ರೂಪಕ್ಕೆ ತಂದಿದ್ದಾರೆ.… Read More