Cinisuddi Fresh Cini News Tv / Serial 

ಇದೇ 18ರಿಂದ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ.

ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. ಹಿರಿಯ ಕಲಾವಿದರ ಸಹಾಯ ಮಾಡುವುದು ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್. ಈ ಬಗ್ಗೆ ಟಿಪಿಎಲ್ ಬಳಗ ಮಾಧ್ಯಮದರೊಟ್ಟಿಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು. ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು.

ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.

Related posts