Cini NewsSandalwood

ಹಲವು ದೃಷ್ಟಿಕೋನದ ” ದ ಸೂಟ್” ಚಿತ್ರದ  ಹಾಡುಗಳು ಬಿಡುಗಡೆ.

ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ವಿಭಿನ್ನ ಬಗೆಯ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ವಿಶೇಷವಾಗಿ ಮದುವೆ ಮುಂತಾದ ಸಮಾರಂಭಗಳಲ್ಲಿ “ಸೂಟ್” ಧರಿಸಿದರೆ ಒಂದು ಕಳೆ. ಅಂತಹ “ಸೂಟ್” ಬಗ್ಗೆ ಸಿನಿಮಾವೊಂದು ಬರುತ್ತಿದ್ದು, ಬಿಡುಗಡೆಗೂ ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು “ಸೂಟ್” ನ ಬಗ್ಗೆ ಮಾತನಾಡಿದರು. ಸಹ ನಿರ್ಮಾಪಕಿ ಮಾಲತಿ ಗೌಡ ಸಮಾರಂಭಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ರಾಮಸ್ವಾಮಿ ಈ ಚಿತ್ರದ ನಿರ್ಮಾಪಕರು.

ಮೊದಲು ಮಾತನಾಡಿದ್ದ ನಿರ್ದೇಶಕ ಭಗತ್ ರಾಜ್, “ಸೂಟ್” ಗೆ ಅದರದೇ ಆದ ವಿಶೇಷತೆ ಇದೆ. ಎಂದುಗೂ “ಸೂಟ್” ಹಾಕದವರು, ಮದುವೆ ಆರತಕ್ಷತೆಯಲ್ಲಾದರೂ “ಸೂಟ್” ಧರಿಸುವುದು ವಾಡಿಕೆ. ಅಂತಹ “ಸೂಟ್” ನಮ್ಮ ಚಿತ್ರದ ಕಥಾನಾಯಕ. ಈ ಚಿತ್ರದಲ್ಲಿ “ಸೂಟ್” ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು “ಸೂಟ್” ನ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. “ಸೂಟ್” ಬಗ್ಗೆ ಅನೇಕ ಗಣ್ಯರು ತಮಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ನಮ್ಮ ಚಿತ್ರ ಚಿತ್ರ ಮೂರು ಕಿರಣಗಳಿಂದ ಹೆಚ್ಚು ಪ್ರಕಾಶಿಸುತ್ತಿದೆ. ಸಂಗೀತ ನಿರ್ದೇಶಕ ಕಿರಣ್ ಶಂಕರ್ ಸುಮಧುರ ಹಾಡುಗಳನ್ನು ನೀಡಿದ್ದಾರೆ.  ಛಾಯಾಗ್ರಾಹಕ ಕಿರಣ್ ಹಂಪಾಪುರ ಅವರ ಛಾಯಾಗ್ರಹಣ “ಸೂಟ್” ನ ಅಂದವನೆ ಮತ್ತಷ್ಟು ಹೆಚ್ಚುಸಿದೆ‌.  ರೇಖಾಚಿತ್ರಗಳ ಮೂಲಕ ಕಿರಣ್ ನಮ್ಮ ಚಿತ್ರಕ್ಕೆ ಜೀವ ತುಂಬಿದ್ದಾರೆ. ಇವರೆ ಆ ಮೂರು ಕಿರಣಗಳು.  ಚಿತ್ರದಲ್ಲಿ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ. ಸದ್ಯದಲ್ಲೇ “ಸೂಟ್” ತೆರೆಗೆ ಬರಲಿದೆ ಎಂದರು.

 

ಸಾಹಿತಿ ಡಾ||ವಿ.ನಾಗೇಂದ್ರ ಪ್ರಸಾದ್ ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ತಿಳಿಸಿ, “ಸೂಟ್” ಬಗ್ಗೆ ತಾವು ಬರೆದಿರುವ ಕಾವ್ಯವನ್ನು ವಾಚಿಸಿದರು.

ಚಿತ್ರದಲ್ಲಿ ಅಭಿನಯಿಸಿರುವ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಪ್ರಣಯ ಮೂರ್ತಿ, ದೀಪ್ತಿ ಕಾಪ್ಸೆ, ಭೀಷ್ಮ ರಾಮಯ್ಯ ಮುಂತಾದವರು ಚಿತ್ರ ಹಾಗೂ ತಮ್ಮ ಪಾತ್ರಗಳ ಕುರಿತು ಮಾತನಾಡಿದರು. ಅನಾರೋಗ್ಯದ ನಿಮಿತ್ತ ಕಾರ್ಯಕ್ರಮಕ್ಕೆ ಹಾಜರಾಗದ ಸಂಗೀತ ನಿರ್ದೇಶಕ ಕಿರಣ್ ಶಂಕರ್ ಹಾಡುಗಳ ಹಾಗೂ ಹಾಡಿದವರ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದರು. ಛಾಯಾಗ್ರಾಹಕ ಕಿರಣ್ ಹಂಪಾಪುರ ಸೇರಿದಂತೆ ಅನೇಕ ತಂತ್ರಜ್ಞರು, ಕಲಾವಿದರು ಹಾಗೂ ಅತಿಥಿಗಳು ಆಡಿಯೋ ರಿಲೀಸ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ದ ಸೂಟ್” ಚಿತ್ರಕ್ಕೆ “ಅತಿಥಿದೇವೋ ಭವ” ಎಂಬ ಅಡಿಬರಹವಿದೆ.

error: Content is protected !!