ಬಾಲಿವುಡ್‌ನ ಖ್ಯಾತ ಕೊರಿಯೋಗ್ರಾಫರ್ ಸರೋಜ್ ಖಾನ್ ಇನ್ನಿಲ್ಲ ..!
ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಸರೋಜ್ ಖಾನ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
ಹೀಗಾಗಿ ಅವರನ್ನು ಮುಂಬೈನ ಬಾಂದ್ರಾದಲ್ಲಿರುವ ಗುರು ನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಹೃದಯಾಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ಸರೋಜ್ ಖಾನ್ ನಿಧನರಾಗಿದ್ದಾರೆ.
1974ರಲ್ಲಿ ಬಿಡುಗಡೆಯಾದ ಹಿಂದಿ ಚಿತ್ರ ‘ನಾಮ್’ ಮೂಲಕ ನೃತ್ಯ ಸಂಯೋಜಕಿಯಾಗಿ ಬೆಳಕಿಗೆ ಬಂದ ಸರೋಜ್ ಖಾನ್, ಬಾಲಿವುಡ್‌ನ ಅನೇಕ ಹಿಟ್ ಚಿತ್ರಗಳಲ್ಲಿ ನೃತ್ಯ ಸಂಯೋಜಕಿಯಾಗಿ ಗುರುತಿಸಿಕೊಂಡಿದ್ದರು. ನಂತರ ಸುಮಾರು 2 ಸಾವಿರಕ್ಕೂ ಅಧಿಕ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.
ಒಟ್ಟು ಮೂರು ಬಾರಿ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರರಾಗಿರುವ ಸರೋಜ್ ಖಾನ್, ಪತಿ ಸೋಹನ್‌ಲಾಲ್, ಪುತ್ರ ಹಮೀದ್ ಖಾನ್ ಹಾಗೂ ಪುತ್ರಿ ಹೀನಾ ಖಾನ್ ಅವರನ್ನು ಅಗಲಿದ್ದಾರೆ.