Cini NewsSandalwood

“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ

ಸಾಮಾನ್ಯವಾಗಿ ಒಂದು ಚಿತ್ರ ಪ್ರೇಕ್ಷಕರ ಗಮನ ಬಹುತೇಕ ಸೆಳೆಯುವುದು ಅದರ ಶೀರ್ಷಿಕೆಯ ಮೂಲಕ. ಹಾಗಾಗಿಯೇ ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿಸಿದ್ದಾರೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಟೈಟಲ್ ಸಾಂಗ್ ಬಿಡುಗಡೆಯಾಯಿತು. ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಅಂಗವಿಕಲ ಹುಡುಗಿ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್ ಸಿ.ಜೆ ಸಂಗೀತ ನೀಡಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ವಿಶ್ವಾಸ್ ಕೃಷ್ಣ ತಿಳಿಸಿದರು .

ನಾನು ಮೂಲತಃ ಉದ್ಯಮಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿಯೇ ನಿರ್ಮಾಣಕ್ಕೆ ಮುಂದಾದೆ. ಚಿತ್ರದ ಪ್ರತಿ ಹಾಡು ಉತ್ತಮವಾಗಿ ಮೂಡಿಬಂದಿದೆ. ಈ ಟೈಟಲ್ ಸಾಂಗ್ ಹಾಡಲು ದೊಡ್ಡ ಸಿಂಗರ್ ಒಬ್ಬರನ್ನ ಕೇಳಿದ್ವಿ, ಆದರೆ ಅವರು ಒಪ್ಪಿಕೊಳ್ಳಲಿಲ್ಲ. ಹಾಗೆ ಮತ್ತೊಬ್ಬ ಖ್ಯಾತ ಗಾಯಕರು ಕೂಡ ಈ ಹಾಡನ್ನು ಹಾಡಲಿಲ್ಲ. ನಾವು ಅನ್ಯ ಭಾಷೆಯು ಗಾಯಕರ ಕೈಯಲ್ಲಿ ಆಡಿಸಿದ್ದೇವೆ ಹಾಡು ನಿಜವಾಗಿಯೂ ಉತ್ತಮವಾಗಿ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹ ಪ್ರೀತಿ ಇರಲಿ ಎಂದು ನಿರ್ಮಾಪಕ ಶರಣಪ್ಪ ಗೌರಮ್ಮ ಕೇಳಿಕೂಂಡರು.

ಇನ್ನು ಈ ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನಿಲ್ ಸಿ ಜೆ, ಟೈಟಲ್ ಸಾಂಗ್ ಕುರಿತು ಡಾ||ವಿ.ನಾಗೇಂದ್ರ ಪ್ರಸಾದ್ ಮಾತನಾಡಿದರು.

ಆನಂದ್ ಆಡಿಯೋ ಶ್ಯಾಮ್, ಗೀತರಚನೆಕಾರ ಗೌಸ್ ಫಿರ್ ಹಾಗೂ ರಾಕಿ (ಶ್ವಾನ) ಟ್ರೈನರ್ ಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದು , ಚಿತ್ರವನ್ನು ಮುಂದಿನ ತಿಂಗಳು ಅದ್ದೂರಿಯಾಗಿ ತೆರೆಯ ಮೇಲೆ ತರಲು ಚಿತ್ರತಂಡ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆಯಂತೆ.

 

error: Content is protected !!