Cini NewsSandalwoodTV Serial

ಜೂನ್ 13ಕ್ಕೆ “ಎಡಗೈಯೇ ಅಪಘಾತಕ್ಕೆ ಕಾರಣ” ಚಿತ್ರ ರಿಲೀಸ್… ಈಗ ಟೈಲರ್ ಸದ್ದು.

Spread the love

ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಕುತೂಹಲಭರಿತವಾದ “ಎಡಗೈಯೇ ಅಪಘಾತಕ್ಕೆ ಕಾರಣ” ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು , ಇದೇ ಜೂನ್ 13ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಯ ಮೇಲೆ ಬರಲಿದೆ. ಈಗಾಗಲೇ ಪೋಸ್ಟರ್, ಟೀಸರ್ ನಲ್ಲಿ ಬರುವ ಒಂದಷ್ಟು ಟ್ವಿಸ್ಟ್ ಅಂಡ್ ಟರ್ನ್ ಅಂಶಗಳು ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿದ್ದು, ಈಗ ಬಿಡುಗಡೆಯಾಗಿರುವ ಟ್ರೈಲರ್ ಭರ್ಜರಿ ಸದ್ದನ್ನ ಮಾಡುತ್ತಿದೆ.

ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಸಿನಿಮಾ ಮಾಡಲಾಗಿದೆ. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ಯುವನಟಿ ಧನು ಹರ್ಷ ನಾಯಕಿಯಾಗಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್, ನಿರೂಪ್ ಭಂಡಾರಿ ತಾರಾಬಳಗದಲ್ಲಿದ್ದಾರೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಸಮರ್ಥ್. ಬಿ .ಕಡಕೊಳ್ ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಈ ಸಿನಿಮಾದಲ್ಲಿದೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್. ವಿ . ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ. ಈ ಸಿನಿಮಾದಲ್ಲಿ ಪ್ರತಿ ಕೆಲಸಕ್ಕೂ ಎಡಗೈ ಬಳಸುವವರ ಸಮಸ್ಯೆಗಳ ಬಗ್ಗೆಯೇ ಬಿಂಬಿಸಲಾಗಿದೆ. ಅವರು ದಿನನಿತ್ಯದ ಜೀವನದಲ್ಲಿ ಎದುರಿಸುವ ಸವಾಲುಗಳ ಕುರಿತಾಗಿಯೇ ಫೋಕಸ್ ಮಾಡಲಾಗಿದೆ. ವಿಭಿನ್ನ ಬಗೆಯ ಚಿತ್ರಗಳನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಅದರಂತೆ ಈ ಚಿತ್ರವು ಕೂಡ ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡು ತೆರೆಯ ಮೇಲೆ ಬರಲು ಸಜ್ಜಾಗಿದೆ.

Visited 1 times, 1 visit(s) today
error: Content is protected !!